ಸೆಪ್ಟೆಂಬರ್ 27 ರಂದು ಕೇರಳದ ಕೊಚ್ಚಿಯಲ್ಲಿ ಕೇರಳ ಕರ್ನಾಟಕ ಜಾನಪದ ಉತ್ಸವ, ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧಕ ರತ್ನ ಪ್ರಶಸ್ತಿ
ಮಂಗಳೂರು, ಕಾಸರಗೋಡು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 27ರಂದು ಕೊಚ್ಚಿಯ ಕಲೂರ್ ಗೋಕುಲಂ ಪಾರ್ಕ್ ಕನ್ವೆನ್ಷನ್ ಸೆಂಟರ್ ನಲ್ಲಿ ಕೇರಳ ಕರ್ನಾಟಕ ಜಾನಪದ ಉತ್ಸವ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಖ್ಯಾತ ಕ್ರೀಡಾ ಅಂಕಣಕಾರ ಜಗದೀಶ್ ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ ನಡೆಯಲಿದೆ.ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಗುರುತಿಸಿಕೊಂಡಿರುವ ಇವರು ಹಲವಾರು ರಾಜ್ಯ – ಅಂತರ್ ರಾಜ್ಯ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.
ಅಂಚನ್ ಅವರ ಕ್ರೀಡಾ ಬರವಣಿಗೆಗಾಗಿ 2013ರಲ್ಲಿ ‘ಮೀಡಿಯಾ ಅವಾರ್ಡ್’, 2014ರಲ್ಲಿ ‘ಸಮಾಜ ರತ್ನ ‘ ರಾಜ್ಯ ಪ್ರಶಸ್ತಿ , 2016ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಲಯನ್ಸ್ ರಾಜ್ಯೋತ್ಸವ ಪ್ರಶಸ್ತಿ ,2018ರಲ್ಲಿ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ; 2019ರಲ್ಲಿ ಜಾನಪದ ಲೋಕ ರಾಜ್ಯ ಪ್ರಶಸ್ತಿ ; ನಮ್ಮ ಕುಡ್ಲ ಸಾಧಕ ಪ್ರಶಸ್ತಿ, 2020ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ ಕೆ.ಎ.ನೆಟ್ಟಕಲ್ಲಪ್ಪ ರಾಜ್ಯ ಪ್ರಶಸ್ತಿ , 2021ರಲ್ಲಿ ಸಿದ್ಧಗಂಗಾಶ್ರೀ ರಾಜ್ಯ ಪ್ರಶಸ್ತಿ , 2022ರಲ್ಲಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಘಟಕದಿಂದ ಕೆ.ಆರ್.ಟ್ಯಾಗೋರ್ ದತ್ತಿ ನಿಧಿ ಪ್ರಶಸ್ತಿ, 2023ರಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಪುರಸ್ಕಾರ, ಸಾಧನ ಪ್ರಶಸ್ತಿ -2023, 2024ರಲ್ಲಿ ಕರ್ನಾಟಕ ಕಲಾಶ್ರೀ ಪ್ರಶಸ್ತಿ, 2026ರಲ್ಲಿ ಜಾನಪದ ರತ್ನ ಪ್ರಶಸ್ತಿ, ಕನ್ನಡ ಪಯಸ್ವಿನಿ ಅವಾರ್ಡ್ -2026 ಅಂತರ್ ರಾಜ್ಯ ಪ್ರಶಸ್ತಿ ಹಾಗೂ ಬಸವಶ್ರೀ -2026 ಪ್ರಶಸ್ತಿಗಳು ಸೇರಿದಂತೆ ಹಲವು ಪುರಸ್ಕಾರವನ್ನು ಇವರು ಪಡೆದಿದ್ದಾರೆ .
